ಸಿಮೆಂಟ್ ಕಾರ್ಖಾನೆಯಲ್ಲಿ ದುರ್ಘಟನೆ ; ಓರ್ವ ಸಾವು, ಭುಗಿಲೆದ್ದ ಆಕ್ರೋಶ..!
ಬೆಳಗಾವಿ : ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಬಿದ್ದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಬುಧವಾರ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ.
ಬಿಹಾರ ಮೂಲದ ರಮೇಶ್ ಬಾಬುಲಾಲ್ ರಾಮ್ ಮೃತಪಟ್ಟ ಕಾರ್ಮಿಕ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಂದಕುಮಾರ್ ಹಾಗೂ ರಮೇಶ್ ರಾಮ್ ಎಂಬ ಇಬ್ಬರು ಕಾರ್ಮಿಕರು ಬಾಗಲಕೋಟೆಯ ಕೆರೊಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ದಾಲ್ಮಿಯಾ ಕಾರ್ಖಾನೆಯಲ್ಲಿ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು ಕಾರ್ಮಿಕ ಸಾವಣಪ್ಪುತ್ತಿದ್ದಂತೆ ಸಹ ಕಾರ್ಮಿಕರು ಕಾರ್ಖಾನೆ ವಿರುದ್ಧ ಆಕ್ರೋಶ ಹೊರಹಾಕಿದರು. ಕುಲಗೋಡ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.


