ಕುರುಬ ಸಮುದಾಯಕ್ಕೆ ಅನ್ಯಾಯ ; ಜಾರಕಿಹೊಳಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್….!

ಬೆಳಗಾವಿ : ಕುರುಬ ಸಮುದಾಯಕ್ಕೆ ಕೊಟ್ಟ ಮಾತನ್ನು ಜಾರಕಿಹೊಳಿ ಸಹೋದರರು ಈಡೇರಿಸದೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗುತ್ತಿವೆ.
ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಕುರುಬ ಸಮುದಾಯಕ್ಕೆ ಕೊಟ್ಟ ಮಾತನ್ನು ತಪ್ಪಿದ್ದಾರೆ ಎಂದು ಬರೆಯಲಾಗಿದೆ.
ಉದ್ದೇಶಪೂರ್ವಕವಾಗಿ ಕುರುಬ ಸಮುದಾಯವನ್ನು ತುಳಿಯುವ ಕೆಲಸ ನಡೆಯುತ್ತಿದೆ. ಎಂದು ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಮಾಡುತ್ತಿದ್ದಾರೆ.
ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ : ಹಾಲು ಮತ ಸಮಾಜಕ್ಕೆ ಕೊಟ್ಟ ಮಾತಿನಂತೆ ನಡೆಯುತ್ತೇವೆ. ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ ಕುರುಬ ಸಮಾಜಕ್ಕೆ ಪ್ರಾಶಸ್ತ್ಯವನ್ನು ನೀಡೇ ನೀಡುತ್ತೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸ್ಪಷ್ಟಪಡಿಸಿದರು.
ಬೆಳಗಾವಿ ಡಿಸಿಸಿ ಬ್ಯಾಂಕಿನ ಎಲ್ಲ 16 ಜನ ನಿರ್ದೇಶಕರು ಕೂಡಿಕೊಂಡು ರಾಹುಲ್ ಜಾರಕಿಹೊಳಿಯವರನ್ನು ಅಪೆಕ್ಸ್ ಬ್ಯಾಂಕಿನ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬ್ಯಾಂಕಿನಿಂದ ಒಬ್ಬರನ್ನು ಅಪೆಕ್ಸ್ ಬ್ಯಾಂಕಿಗೆ ಕಳುಹಿಸಿಕೊಡುವ ನಿಯಮ ಸರ್ಕಾರದ್ದಾಗಿದೆ.
ಈ ಹಿನ್ನೆಲೆಯಲ್ಲಿ ರಾಹುಲ್ ಜಾರಕಿಹೊಳಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಕಳಿಸಿದ್ದೇವೆ. ನಂತರ ರಾಹುಲ್ ಜಾರಕಿಹೊಳಿಯವರು ಹೆಸರನ್ನು ಸೂಚಿಸುವ ಒಬ್ಬ ವ್ಯಕ್ತಿಯನ್ನು ಬೆಳಗಾವಿ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾಗುತ್ತಾರೆ.
ಇದು ಕೂಡ ಸಹಕಾರ ಸಂಘದ ನಿಯಮವಾಗಿದೆ. ಇದಿಷ್ಟು ನಿಜ ಸಂಗತಿಯಾಗಿದೆ. ಮುಂದಿನ ದಿನಗಳಲ್ಲಿ ಕುರುಬ ಸಮಾಜದವರನ್ನು ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲಾಗುತ್ತಿದೆ ಎಂದು ಬಾಲಚಂದ್ರ ಜಾರಕಿಹೊಳಿಯವರು ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

