ಬೆಳಗಾವಿ : ಭೀಕರ ರಸ್ತೆ ಅಪಘಾತ, ದಂಪತಿ ಸಾವು

ಬೆಳಗಾವಿ : ನಿಂತಿದ್ದ ಕಾರಿಗೆ ಕಂಟೇನರ್ ವಾಹನ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಹತ್ತಿರ ಶುಕ್ರವಾರ ನಡೆದಿದೆ.
ಕೊಲ್ಹಾಪುರ ಮೂಲದ ಜಿಗರ್ ನಾಕ್ರಾನಿ & ಹೇತಿಕಾ ನಾಕ್ರಾನಿ ಮೃತಪಟ್ಟ ದುರ್ದೈವಿಗಳು. ಹುಬ್ಬಳ್ಳಿಯಿಂದ ಕೊಲ್ಹಾಪುರಕ್ಕೆ ತೆರಳುವ ವೇಳೆ ಕುಗನೋಳ್ಳಿ ಬಳಿ ಕಾರು ನಿಲ್ಲಿಸಲಾಗಿತ್ತು.
ಈ ವೇಳೆ ರಭಸದಿಂದ ಬಂದ ಕಂಟೇನರ್ ವಾಹನ ಡಿಕ್ಕಿ ಹೊಡೆದಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

