Select Page

Advertisement

ಬೆಳಗಾವಿ – ನಕಲಿ ಪತ್ರಕರ್ತರ ಮೊಬೈಲ್ ನಲ್ಲಿ‌ ನೂರಕ್ಕೂ ಅಧಿಕ ಅಶ್ಲೀಲ ವೀಡಿಯೋ ; ಕರಾಳ ಮುಖ‌ ಬಯಲು…!

ಬೆಳಗಾವಿ – ನಕಲಿ ಪತ್ರಕರ್ತರ ಮೊಬೈಲ್ ನಲ್ಲಿ‌ ನೂರಕ್ಕೂ ಅಧಿಕ ಅಶ್ಲೀಲ ವೀಡಿಯೋ ; ಕರಾಳ ಮುಖ‌ ಬಯಲು…!



ಬೆಳಗಾವಿ : ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕತರ್ನಾಗ್ ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಬಹಿರಂಗವಾಗಿದೆ.

ಜಿಲ್ಲಾ ಮಟ್ಟದ ಹಿರಿಯ ಮಹಿಳಾ ಅಧಿಕಾರಿಯ ಮನೆಯಲ್ಲಿ ವಿದ್ಯುತ್ ಬಲ್ಬ್‌ನ ಹೋಲ್ಡರ್ ಒಳಗೆ ಸೂಕ್ಷ್ಮ ಕ್ಯಾಮರಾ ಅಳವಡಿಸಿ ಖಾಸಗಿ ಕ್ಷಣಗಳನ್ನು ಸೆರೆ ಹಿಡಿದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನಂತರ ಆ ವಿಡಿಯೋಗಳನ್ನು ಆಧಾರವನ್ನಾಗಿ ಮಾಡಿಕೊಂಡು ಲಕ್ಷಾಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿರುವುದು ತಿಳಿದುಬಂದಿದೆ.

ಕೇಳಿದಷ್ಟು ಹಣ ನೀಡದಿದ್ದರೆ ನಗ್ನ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ ಹಣ ಲೂಟಿ ಮಾಡಿರುವ ಆರೋಪ ಎದುರಾಗಿದೆ. ಮಹಿಳಾ ಅಧಿಕಾರಿಯಿಂದಲೇ 50 ಲಕ್ಷ ರೂಪಾಯಿ ಹಣ ನೀಡುವಂತೆ ಒತ್ತಾಯಿಸಿದ್ದರೆಂಬ ಸಂಗತಿ ಬಹಿರಂಗವಾಗಿದೆ.

ಪ್ರಕರಣದಲ್ಲಿ ಬಂಧಿತರಾದ ಸಮೀರ್ ಶೇಖ್, ಅಬ್ದುಲ್‌ರಶೀದ್ ಮಕಾಂದಾರ್ ಹಾಗೂ ಮೊಹ್ಮದ್ ಬಾಳೇಕುಂದ್ರಿ ಎಂಬ ಮೂವರು ಆರೋಪಿಗಳನ್ನು ಮೂರು ದಿನಗಳ ಹಿಂದೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿರುವ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು, ಆರೋಪಿಗಳ ಮೊಬೈಲ್ ಫೋನ್‌ಗಳನ್ನು ತಾಂತ್ರಿಕವಾಗಿ ಪರಿಶೀಲಿಸಿದ ವೇಳೆ ನೂರಕ್ಕೂ ಅಧಿಕ ಹಸಿ ಬಿಸಿ ಬೆತ್ತಲೆ ವಿಡಿಯೋಗಳು ಪತ್ತೆಯಾಗಿವೆ.

ಮೊಬೈಲ್ ರಿಸ್ಟೋರ್ ಮಾಡಿದ ಬಳಿಕ ಮತ್ತೊಬ್ಬ ಅಧಿಕಾರಿಯ ಖಾಸಗಿ ವಿಡಿಯೋ ಕೂಡ ಪತ್ತೆಯಾಗಿದ್ದು, ಇನ್ನೂ ಹಲವು ಬ್ಲ್ಯಾಕ್‌ಮೇಲ್ ಪ್ರಕರಣಗಳು ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡುವ ಮುನ್ನವೇ ಇಂತಹ ಕೃತ್ಯಗಳನ್ನು ಎಸಗಿರುವುದಾಗಿ ಆರೋಪಿಗಳು ವಿಚಾರಣೆಯಲ್ಲಿ ತಪ್ಪೊಪ್ಪಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

ತನಿಖೆ ಚುರುಕುಗೊಂಡ ಹಿನ್ನೆಲೆಯಲ್ಲಿ ಇನ್ನಷ್ಟು ಸಂತ್ರಸ್ತರು ಹೊರಬರುವ ಸಾಧ್ಯತೆ ಇದ್ದು, ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ವಿಚಾರಣೆ ಮುಂದುವರೆಸಲಾಗಿದೆ. ಪ್ರಕರಣ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.

Advertisement

Leave a reply

Your email address will not be published. Required fields are marked *

error: Content is protected !!