ಪರೀಕ್ಷೆಗೆ ಹೊರಟಿದ್ದ PU ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು..!

ಚಿಕ್ಕೋಡಿ : ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತದಿಂದ ಮೃತಪಟ್ಟ ಘಟನೆ
ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ನಡೆದಿದೆ.
ಭೂಮಿಕಾ ಮಾಳಂಗಿ (17) ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆಗೆ ಹೋಗಲು ತಯಾರಾಗುವ ವೇಳೆ ಹೃದಯಾಘಾತ ಸಂಭವಿಸಿದೆ.
ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದ ಪೋಷಕರು.
ಮಾರ್ಗ ಮಧ್ಯೆಯೇ ಅಸುನೀಗಿದ ವಿದ್ಯಾರ್ಥಿನಿ ಭೂಮಿಕಾ.
ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.


