Select Page

Advertisement

ಸಾರಿಗೆ ಸಚಿವರ ಬಳಿ ಮಹತ್ವದ ಬೇಡಿಕೆ ಇಟ್ಟ ಲಕ್ಷ್ಮೀ ಹೆಬ್ಬಾಳಕರ್…! ಏನದು.?

ಸಾರಿಗೆ ಸಚಿವರ ಬಳಿ ಮಹತ್ವದ ಬೇಡಿಕೆ ಇಟ್ಟ ಲಕ್ಷ್ಮೀ ಹೆಬ್ಬಾಳಕರ್…! ಏನದು.?

ಬೆಳಗಾವಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಸಾರಿಗೆ ಸಂಸ್ಥೆ ಎಂದು ನಾಮಕರಣ ಮಾಡಬೇಕು. ಆದಷ್ಟು ಗ್ರಾಮೀಣ ಪ್ರದೇಶಕ್ಕೆ ಬೇಡಿಕೆ ಇರುವಷ್ಟು ಹೊಸ ಬಸ್ ಗಳನ್ನು ನೀಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕೆಂದು ಸಾರಿಗೆ ಸಚಿವರ ಬಳಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹತ್ವದ ಬೇಡಿಕೆ ಇರಿಸಿದ್ದಾರೆ.


ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ ಹಾಗೂ ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಹೊಸದಾಗಿ ನೇಮಕಾತಿ ಹೊಂದಿದ ಸಿಬ್ಬಂದಿಗೆ ಆದೇಶ ಪತ್ರ ವಿತರಣೆ, ಅಪಘಾತ, ಅಪರಾಧ ರಹಿತ ಸೇವೆ ಸಲ್ಲಿಸಿದ ಸಂಸ್ಥೆಯ ಚಾಲನಾ ಸಿಬ್ಬಂದಿಗೆ ಬೆಳ್ಳಿ ಪದಕ ವಿತರಣೆ ಹಾಗೂ ನೂತನ ತಂತ್ರಾಂಶಗಳ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

“ರಾಜ್ಯದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ ಮತ್ತು ಸಬಲೀಕರಣದ ಸಂಕೇತಗಳಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.”

ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೊಡುಗೆ ಬಹಳ ದೊಡ್ಡದಿದೆ. ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಕೂಡ ಬಸ್ ಗಳ ಕೊಡುಗೆ ಮಹತ್ವದ್ದಾಗಿದೆ ರಾಮಲಿಂಗಾ ರೆಡ್ಡಿ ಅವರು ಸಾರಿಗೆ ಇಲಾಖೆಯ ಸಾರಥ್ಯ ವಹಿಸಿಕೊಂಡ ನಂತರ ಇಲಾಖೆಯಲ್ಲಿ ಸಾಕಷ್ಟು ಹೊಸತನವನ್ನು ತಂದಿದ್ದಾರೆ. ರಾಜ್ಯಾದ್ಯಂತ 7,800 ಹೊಸ ಬಸ್ ಗಳನ್ನು ಒದಗಿಸಿದ್ದಾರೆ. ಜನರ ಪ್ರಯಾಣ ಸುಖಕರವಾಗಿರುವಂತೆ ನೋಡಿಕೊಳ್ಳಲು ಏನು ಬೇಕೋ ಅದನ್ನೆಲ್ಲ ಮಾಡುತ್ತಿದ್ದಾರೆ. ಶಕ್ತಿ ಯೋಜನೆ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಯಶಸ್ಸು ಕಾಣಲು ರಾಮಲಿಂಗಾ ರಡ್ಡಿ ಅವರ ಶ್ರಮ ಕಾರಣವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಜಿಲ್ಲೆಯ ಬಹುದಿನಗಳ ಬೇಡಿಕೆಗಳು ಇಂದು ಈಡೇರಿದಂತಾಗಿದೆ. ವಾ.ಕ.ರ.ಸಾ.ಸಂಸ್ಥೆಗೆ 250 ಹೊಸ ನೀಡಲಾಗಿದ್ದು‌, ಸಂತಸದ ಸಂಗತಿಯಾಗಿದೆ.

ಅತೀ ದೊಡ್ಡ ಜಿಲ್ಲೆಯಾದ ಬೆಳಗಾವಿಗೆ ಇನ್ನೂ ಹೆಚ್ಚಿನ ಹೊಸ ಒದಗಿಸಲು‌ ಮನವಿ ಮಾಡಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕಳೆದ ಹಾಗೂ ಪ್ರಸ್ತುತ ಅಧಿಕಾರ‌ ಅವಧಿಯಲ್ಲಿ 7800 ಹೊಸ ಬಸ್ ಖರಿದಿಸಿದ್ದು, 9000 ನೇಮಕಾತಿ,1000 ಅನುಕಂಪದ‌ ನೇಮಕಾತಿ ಮಾಡಿರುವುದು ದಾಖಲೆಯಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ವಾ.ಕ.ರ.ಸಾ.ಸಂಸ್ಥೆ ಅಧ್ಯಕ್ಷರಾದ ಭರಮಗೌಡ (ರಾಜು) ಕಾಗೆ
ಶಾಸಕರಾದ ಆಸೀಫ್(ರಾಜು) ಸೇಠ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಬಾಬಸಾಹೇಬ ಪಾಟೀಲ, ವಿಠ್ಠಲ್ ಹಲಗೇಕರ, ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಭರಮಣ್ಣ ಉಪ್ಪಾರ, ವಾ.ಕ.ರ.ಸಾ.ಸಂಸ್ಥೆ ಉಪಾಧ್ಯಕ್ಷರಾದ ಸುನೀಲ ಹಣಮನ್ನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!