Select Page

Advertisement

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ; 6 ಜನ ಸ್ಥಳದಲ್ಲೇ ಸಾವು

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ; 6 ಜನ ಸ್ಥಳದಲ್ಲೇ ಸಾವು

ಬೆಳಗಾವಿ : ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಮರಳುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ‌‌ ನಡೆದಿದೆ.

ಗುರುವಾರ ಮಧ್ಯಾಹ್ನ ಖಾನಾಪುರ ತಾಲೂಕಿನ ಮಂಗ್ಯಾನಕೊಪ್ಪ ಗ್ರಾಮದ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ 6 ಜನ ಸಾವಣಪ್ಪಿದ್ದಾರೆ. ಶಾರುಖ್ ಪೆಂಡಾರಿ ( 30 ) ಇಕ್ಬಾಲ್ ಜಮಾದಾರ ( 50 ) ಸಾನಿಯಾ ಲಂಗೊಟಿ ( 37 ) ಉಮರ್ ಲಂಗೋಟಿ ( 17 ) ಶಬನಮ್ ಲಂಗೋಟಿ ( 37 ) ಪರಾನ್ ಲಂಗೋಟಿ ( 13 ) ಮೃತಪಟ್ಟದ್ದು ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹತ್ತು ಜನ ಸ್ವಿಪ್ಟ್ ಡಿಸೈರ್ ಕಾರಿನಲ್ಲಿ ಸಂಚರಿಸುತ್ತಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು.‌ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಮಾಹಿತಿ ನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!