Select Page

ವಂಚನೆ ಪ್ರಕರಣ ; ಶಿವಾನಂದ ನೀಲಣ್ಣನವರ ಕೊನೆಗೂ ಬಂಧನ

ವಂಚನೆ ಪ್ರಕರಣ ; ಶಿವಾನಂದ ನೀಲಣ್ಣನವರ ಕೊನೆಗೂ ಬಂಧನ

ಬೆಳಗಾವಿ : ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮಾಲೀಕ ಸಾವಿರಾರು ಕೋಟಿ ಹೂಡಿಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿರುವ ಆರೋಪ ಕೇಳಿಬಂದಿದೆ. ನಿನ್ನೆ ಶಿವಂ ಅಸೋಸಿಯೇಟ್ ಕಚೇರಿ ಮೇಲೆ ಉಪ ವಿಭಾಗಾಧಿಕಾರಿ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಿದರು. ಇಂದು ಮೂರು ಕಚೇರಿ ಹಾಗೂ ಒಂದು ಪ್ಲ್ಯಾಟ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಪ್ರಸ್ತುತ ಶಿವಾನಂದ ನೀಲಣ್ಣನವರ್ ತಮ್ಮ ಮನೆಯಲ್ಲಿ ಇರುವ ಮಾಹಿತಿ ಲಭ್ಯವಾಗಿದ್ದು, ಯಾವುದೇ ಹೊತ್ತಿನಲ್ಲಿ ಅವರನ್ನು ಪೊಲೀಸ್ ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


Advertisement

Leave a reply

Your email address will not be published. Required fields are marked *

error: Content is protected !!