Select Page

ಕೊಕಟನೂರ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ

ಕೊಕಟನೂರ ಕಾಲೇಜಿನಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ



ಬೆಳಗಾವಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಐಗಳಿ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಾಲೇಜಿನ ಗೇಟ್ ಹಾಗೂ ಕೊಠಡಿಯ ಬೀಗ ಮುರಿದು ಲ್ಯಾಪ್‌ಟಾಪ್ ಮತ್ತು ಪ್ರೊಜೆಕ್ಟರ್ ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದರ್ಶನ ಹೊನಕಾಂಬಳೆ (19) ಹಾಗೂ ರಾಕೇಶ ಹೊನಕಾಂಬಳೆ (22) ಎಂಬ ಇಬ್ಬರನ್ನು ಬಂಧಿಸಿ, 1 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಿಂಚಿನ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!