Select Page

ನೀಲಣ್ಣನವರ ಬಳಿ ಕಾರು ಗಿಫ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್..!

ನೀಲಣ್ಣನವರ ಬಳಿ ಕಾರು ಗಿಫ್ಟ್ ಪಡೆದ ಕರವೇ ಜಿಲ್ಲಾಧ್ಯಕ್ಷನಿಗೆ ಸಿಐಡಿ ನೋಟಿಸ್..!



ಬೆಳಗಾವಿ : ಬಹುಕೋಟಿ ಠೇವಣಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಶಿವಂ ಅಸೋಸಿಯೇಟ್ಸ್ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದು, ಇದೀಗ ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಆರ್. ಅಭಿಲಾಷ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಬಂಡವಾಳ ಹೂಡಿಕೆ ಹಾಗೂ ಠೇವಣಿದಾರರ ಹಣ ದುರುಪಯೋಗ ಆರೋಪಗಳ ತನಿಖೆ ವೇಳೆ, ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರ ಅವರು ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದ ಕುರಿತು ಮಾಹಿತಿ ಸಿಐಡಿಗೆ ಲಭ್ಯವಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆ ಕಾರಿನ ಖರೀದಿ ಮೂಲ, ಹಣದ ವ್ಯವಹಾರ ಹಾಗೂ ಬಳಕೆ ಕುರಿತು ತನಿಖೆ ನಡೆಸಲು ಕಾರನ್ನು ಹಾಜರುಪಡಿಸುವಂತೆ ಸಿಐಡಿ ಅಧಿಕಾರಿಗಳು ಆರ್. ಅಭಿಲಾಷ್ ಅವರಿಗೆ ಸೂಚಿಸಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ ಶಿವಾನಂದ ನೀಲಣ್ಣವರ ಅವರಿಗೆ ಸಂಬಂಧಿಸಿದ ಹಲವು ಬ್ಯಾಂಕ್ ಖಾತೆಗಳನ್ನು ಸಿಐಡಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಕೋಟ್ಯಂತರ ರೂಪಾಯಿ ಹಣದ ವಹಿವಾಟಿನ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಶಿವಂ ಅಸೋಸಿಯೇಟ್ಸ್ ಸಂಸ್ಥೆ ಮೂಲಕ ಸಾರ್ವಜನಿಕರಿಂದ ದೊಡ್ಡ ಪ್ರಮಾಣದಲ್ಲಿ ಠೇವಣಿ ಸಂಗ್ರಹಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ವಿವಿಧ ಆಯಾಮಗಳಲ್ಲಿ ಮುಂದುವರಿದಿದೆ.

ಇದೇ ಪ್ರಕರಣದಲ್ಲಿ ಹಲವು ಗಣ್ಯರು, ಸಂಘಟನೆಗಳ ಮುಖಂಡರು ಹಾಗೂ ಪ್ರಭಾವಿ ವ್ಯಕ್ತಿಗಳಿಗೆ ಉಡುಗೊರೆ, ವಾಹನ ಮತ್ತು ಆಸ್ತಿ ನೀಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ನೋಟಿಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Advertisement

Leave a reply

Your email address will not be published. Required fields are marked *

error: Content is protected !!