Select Page

ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಸಮಾರೋಪ ಸಮಾರಂಭ

ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ಸಮಾರೋಪ ಸಮಾರಂಭ

ರಾಮದುರ್ಗ : ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆಯಾದರೆ ರೈತರಿಗೆ ಸಾಕಷ್ಟು ಲಾಭ ಇವೆ. ಈ ಕುರಿತು ಹೊಸ ಆವಿಷ್ಕಾರಗಳು ನಡೆಯಬೇಕು. ವಿದ್ಯಾರ್ಥಿಗಳು ಸಂಸ್ಕಾರಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ತೊಂಡಿಕಟ್ಟಿಯ ಅವಧೂತ ಗಾಳೇಶ್ವರ ಮಠದ ಶ್ರೀ ವೆಂಕಟೇಶ್ ಮಹಾರಾಜರು ಅಭಿಪ್ರಾಯಪಟ್ಟರು.

ತಾಲೂಕಿನ ಗೊಡಚಿ ಗ್ರಾಮದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ. ಕಿತ್ತೂರ ರಾಣಿ ಚೆನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ಅರಭಾವಿಯ ತೋಟಗಾರಿಕೆ ವಿದ್ಯಾರ್ಥಿಗಳ 2025 – 2026 ನೇ ಸಾಲಿನ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರದ ( RHWE) ಸಮಾರೋಪ ಸಮಾರಂಭ ಕಾರ್ಯಕ್ರಮ ಉದ್ದೇಶಿಸಿ ಇವರು ಮಾತನಾಡಿದರು.

ಬಾಗಲಕೋಟೆ ತೋಟಗಾರಿಕೆ ವಿಶ್ವ ವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ. ತಮ್ಮಯ್ಯ ಎನ್,ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಾಮೀಣ ತೋಟಗಾರಿಕೆ ಶಿಬಿರದಲ್ಲಿ ಕೈಗೊಂಡ ಚಟುವಟಿಕೆಗಳ ಕುರಿತು ರೈತರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಆನಂದ ಬ. ಮಾಸ್ತಿಹೊಳಿ, ಡೀನ್ ಕಿ. ರಾ. ಚ. ತೋ.ಮ. ಅರಭಾವಿ ವಹಿಸಿಕೊಂಡಿದ್ದರು. ಶ್ರೀನಾಥ್ ಚಿಮ್ಮಲಗಿ, ಪ್ರಕಾಶ್ ಮುಗಳಕೋಡ ಮತ್ತು ಮಂಜುನಾಥ್ ದೇವರಡ್ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಅಂಗವಾಗಿ ತೋಟಗಾರಿಕೆ ವಸ್ತು ಪ್ರದರ್ಶನ, ನೂತನ ಕೃಷಿ ತಂತ್ರಜ್ಞಾನಗಳ ಪರಿಚಯ , ಸಮಗ್ರ ಕೀಟ ಹಾಗೂ ರೋಗ ನಿರ್ವಹಣಾ ಕ್ರಮಗಳು , ಇದೆ ರೀತಿಯಾಗಿ ಆಯಾ ವಿಭಾಗಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರದರ್ಶಸಿಸಲಾಯಿತು ,ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಗ್ರ ಕೃಷಿಯ ಮಾಹಿತಿ ಪಡೆದುಕೊಂಡರು ಹಾಗೂ ರೈತರಿಗೆ ಸಸಿಗಳನ್ನು ವಿತರಿಸಲಾಯಿತು. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶಂಕರಗೌಡ ಮತ್ತು ಸುನಿತಾ ನಿರೂಪಿಸಿದರು, ಜ್ಯೋತಿ ಸ್ವಾಗತಿಸಿದರು ಹಾಗೂ ಇಮ್ರಾನ್ ವಂದಿಸಿದರು.


Advertisement

Leave a reply

Your email address will not be published. Required fields are marked *

error: Content is protected !!