Select Page

Advertisement

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಕೆ ; ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಭವ್ಯ ದಿಪೋತ್ಸವ..!

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಕೆ ; ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಭವ್ಯ ದಿಪೋತ್ಸವ..!

ಬೆಳಗಾವಿ: ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆಗಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ಅಂತಾನೇ ಪ್ರಖ್ಯಾತಿ ಪಡೆದಿರುವ ಬೆಳಗಾವಿ ಕಪಿಲೇಶ್ವರ ಮಂದಿರದಲ್ಲಿ ಶಾಸಕ ಅಭಯ್ ಪಾಟೀಲ ನೇತೃತ್ವದಲ್ಲಿ ಭವ್ಯ ದೀಪೋತ್ಸವ ಹಮ್ಮಿಕೊಳ್ಳಲಾಗಿತ್ತು.



ಐತಿಹಾಸಿಕ ಕಪಿಲೇಶ್ವರ ಮಂದಿರವು ಬುಧವಾರ ಸಂಜೆ ದೀಪಗಳಿಂದ ಕಂಗೊಳಿಸಿತು. ದೀಪಾವಳಿ ಹಬ್ಬವನ್ನು ನೆನಪಿಸಿತು. ಮೋದಿ ಪ್ರಧಾನಿಯಾಗಿ 12 ವರ್ಷ ಪೂರೈಸಿದ ನಿಮಿತ್ತ 12 ಸಾವಿರ ದೀಪಗಳನ್ನು ಹಚ್ಚಲಾಯಿತು. ಮಂದಿರದ ಆವರಣದಲ್ಲಿ ಕಣ್ಣು ಹಾಯಿಸಿದ ಕಡೆ ಎಲ್ಲಾ ದೀಪಗಳು ಬೆಳಕಿನ ಚಿತ್ತಾರ ಮೂಡಿಸಿದವು. ಚಿಕ್ಕಮಕ್ಕಳು, ಮಹಿಳೆಯರು ಸೇರಿದಂತೆ ಅನೇಕರು ದೀಪ ಹಚ್ಚಿ, ಮೋದಿಯವರ ಮೇಲಿನ ತಮ್ಮ ಅಭಿಮಾನ ಪ್ರದರ್ಶಿಸಿದರು.



ದೀಪೋತ್ಸವ ಮೊದಲು ಇಲ್ಲಿನ ಶಿವಲಿಂಗಕ್ಕೆ ವಿಶೇಷ ಪೂಜೆ, ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ದೇಶದ ಸಮೃದ್ಧಿ, ಗಡಿಭದ್ರತೆ, ಆರ್ಥಿಕ ಅಭಿವೃದ್ಧಿ ಹಾಗೂ ಪ್ರಧಾನಿ ಮೋದಿ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.



ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ಮೋದಿ-ಮೋದಿ, ಮತ್ತೊಮ್ಮೆ ಮೋದಿ, ಜೈ ಶ್ರೀರಾಮ ಎಂಬ ಜಯಘೋಷಗಳನ್ನು ಕೂಗಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಸಂಭ್ರಮಿಸಿದರು. ಭಕ್ತಿಭಾವ, ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣ ಈ ವೇಳೆ ಕಂಡು ಬಂದಿತು.



ಅಭಯ್ ಪಾಟೀಲ ಮಾತನಾಡಿ, ಭಾರತ ದೇಶದ ಇತಿಹಾಸದಲ್ಲಿ ಅತೀ ಹೆಚ್ಚು ದಿನಗಳ ಕಾಲ ಪ್ರಧಾನಿ ಆದ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲುತ್ತದೆ. ಅವರು ಅಧಿಕಾರಕ್ಕೆ ಬಂದು 12 ವರ್ಷ ಆಗಿರುವುದರಿಂದ ನಮ್ಮ ಮತಕ್ಷೇತ್ರದ ಕಾರ್ಯಕರ್ತರು 12 ಸಾವಿರ ದೀಪಗಳನ್ನು ಬೆಳಗಿಸಿ ಸಂಭ್ರಮಿಸಿದ್ದಾರೆ. ಈ ವೇಳೆ ದೇವರಿಗೆ ಮಹಾಮಂಗಳಾರತಿ ಮಾಡಿ, ಇನ್ನಷ್ಟು ವರ್ಷಗಳ ಕಾಲ ಆಡಳಿತ ನಡೆಸುವ ಶಕ್ತಿಯನ್ನು ಕರುಣಿಸುವಂತೆ ಪ್ರಾರ್ಥಿಸಲಾಯಿತು ಎಂದರು.



ಬಳಿಕ ಎಲ್ಲರಿಗೂ ಸಿಹಿ ವಿತರಿಸಲಾಯಿತು. ಈ ವೇಳೆ ಮೇಯರ್ ಪ್ರೀತಿ ಕಾಮಕರ, ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ, ಬೆಳಗಾವಿ ದಕ್ಷಿಣ ಮಹಿಳಾ‌ ಮೋರ್ಚಾ ಉಪಾಧ್ಯಕ್ಷೆ ಮಾಲತಿ ಸೆಕ್ಸೆನಾ ಸೇರಿದಂತೆ ಪಾಲಿಕೆ ಸದಸ್ಯರು, ಬಿಜೆಪಿ ಕಾರ್ಯಕರ್ತರು ಇದ್ದರು.


Advertisement

Leave a reply

Your email address will not be published. Required fields are marked *

error: Content is protected !!