ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಯತ್ನ ; ಬೆಳಗಾವಿ ಕಾಂಗ್ರೆಸ್ ನಾಯಕಿ ವಿರುದ್ಧ ದೂರು..!

ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡ ಆಹುಗನ ಜೊತೆ ಮದುವೆ ಆಗಬಾರದು. ಇಲ್ಲವಾದರೆ ಖಾಸಗಿ ಕ್ಷಣದ ಫೋಟೋಗಳನ್ನು ಮಾಧ್ಯಮಕ್ಕೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ಬೆಳಗಾವಿ ಕಾಂಗ್ರೆಸ್ ಮುಖಂಡೆಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಮನನೊಂದ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ಎಂಬುವವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಲೀಂ ಕಿಲ್ಲೇದಾರ್ ಎಂಬಾತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳಿಸಿದ್ದಲ್ಲದೆ, ಖಾಸಗಿ ಕ್ಷಣದ ಫೋಟೋಗಳನ್ನು ಇಟ್ಟುಕೊಂಡಿದ್ದಾನೆ.
ಈಗ ಸಂತ್ರಸ್ತ ಯುವತಿ ಸಲೀಂ ಎಂಬ ಯುವಕನಿಗೆ ಮದುವೆ ಆಗುವಂತೆ ಕೇಳುತ್ತಿದ್ದಾಳೆ. ಆದರೆ ಬೆಳಗಾವಿ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ಯುವಕನನ್ನು ಬಿಟ್ಟುಬಿಡು, ಇಲ್ಲವಾದರೆ ನಿನ್ನ ಖಾಸಗಿ ಕ್ಷಣದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕಿರುಕುಳ ನೀಡುತ್ತಿದ್ದಾಳೆ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ, ಇವರ ಪಿಎ ನನಗೆ ಪರಿಚಯ ಇದ್ದಾರೆ. ಪೊಲೀಸ್ ಠಾಣೆಯಲ್ಲಿ ನನ್ನ ಮಾತು ನಡೆಯುತ್ತದೆ. ಯಾವುದೇ ಕಾರಣಕ್ಕೂ ಯುವಕನನ್ನು ಮದುವೆ ಆಗಬಾರದು ಎಂದು ಕಾಂಗ್ರೆಸ್ ಮುಖಂಡೆ ಆಯೇಷಾ ಸನದಿ ಬೆದರಿಕೆ ಹಾಕುತ್ತಿದ್ದು, ಇದರಿಂದ ನೊಂದ ಸಂತ್ರಸ್ತ ಯುವತಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು ಸಾವು, ಬದುಕಿನ ನಡುವೆ ಹೋರಾಡುತ್ತಿದ್ದು ಕೂಡಲೇ ನಮಗೆ ನ್ಯಾಯ ಒದಗಿಸುವಂತೆ ಯುವತಿಯ ಪೋಷಕರು ಬೆಳಗಾವಿ ಪೊಲೀಸ್ ಕಮಿಷನರ್ ಗೆ ಲಿಖಿತ ರೂಪದಲ್ಲಿ ದೂರು ದಾಖಲಿಸಿದ್ದಾರೆ.


