ಕೃಷ್ಣಾ ನದಿಗೆ ನೀರು ಬರುವುದು ಡೌಟ್ ; ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಕೊಯ್ನಾ ಜಲಾಶಯ ಭರ್ತಿಯಾಗಿದ್ದ ಸಂದರ್ಭಗಳಲ್ಲಿಯೂ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರಲಿಲ್ಲ ಎಂದು ಅವರು ತಿಳಿಸಿದರು. ಪ್ರಸ್ತುತ ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ ಇರುವುದರಿಂದ ಅಲ್ಲಿನ ಅಧಿಕಾರಿಗಳು ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ
ಬೆಳಗಾವಿ : ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ತೀವ್ರ ನೀರಿನ ಅಭಾವ ಉಂಟಾಗಿರುವುದರಿಂದ ಅಲ್ಲಿಂದ ನೀರು ಬಿಡುವುದು ಕಷ್ಟಕರ. ಈ ಬಗ್ಗೆ ಮಹಾರಾಷ್ಟ್ರ ರಾಜ್ಯದ ಅಧಿಕಾರಿಗಳು ಈಗಾಗಲೇ ತಮ್ಮ ಅಸಹಾಯಕತೆ ತಿಳಿಸಿರುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಹಾರಾಷ್ಟ್ರದಿಂದ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ವರ್ಷ ಮಾತ್ರವಲ್ಲದೆ ಹಿಂದಿನ ವರ್ಷಗಳಲ್ಲಿಯೂ ರಾಜ್ಯ ಸರ್ಕಾರ ಮನವಿ ಸಲ್ಲಿಸಿದ್ದರೂ ಮಹಾರಾಷ್ಟ್ರದಿಂದ ನಿರೀಕ್ಷಿತ ಪ್ರಮಾಣದಲ್ಲಿ ನೀರು ಬಿಡುಗಡೆಗೊಂಡಿಲ್ಲ.
ಕೊಯ್ನಾ ಜಲಾಶಯ ಭರ್ತಿಯಾಗಿದ್ದ ಸಂದರ್ಭಗಳಲ್ಲಿಯೂ ನೀರು ಬಿಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿರಲಿಲ್ಲ ಎಂದು ಅವರು ತಿಳಿಸಿದರು. ಪ್ರಸ್ತುತ ಮಹಾರಾಷ್ಟ್ರದಲ್ಲಿಯೂ ನೀರಿನ ಅಭಾವ ಇರುವುದರಿಂದ ಅಲ್ಲಿನ ಅಧಿಕಾರಿಗಳು ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಈಗಾಗಲೇ ತಿಳಿಸಿದ್ದಾರೆಂದು ಹೇಳಿದರು.
ಬೆಳಗಾವಿ ನಗರದಲ್ಲಿ ಮುಂದಿನ ಎರಡು ತಿಂಗಳಿಗೆ ಸಾಕಾಗುವಷ್ಟು ಕುಡಿಯುವ ನೀರಿನ ಸಂಗ್ರಹ ಲಭ್ಯವಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ.
ನೀರಿನ ಕೊರತೆ ಎದುರಾಗುವ ಪ್ರದೇಶಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ನಡೆಯುವಂತೆ ಈಗಾಗಲೇ ಗ್ರಾಮ ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ನಗರದಲ್ಲಿ ಲಭ್ಯವಿರುವ ನೀರಿನ ಪ್ರಮಾಣ, ವಿತರಣಾ ವ್ಯವಸ್ಥೆ ಹಾಗೂ ತಾಂತ್ರಿಕ ಅಡಚಣೆಗಳನ್ನು ಪರಿಗಣಿಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಯೋಜನೆ ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದ ಬಳಿಕ ನಿರಂತರ ನೀರು ಸರಬರಾಜಿನ ಉದ್ದೇಶವನ್ನು ಸಾಧಿಸಲಾಗುವುದು ಎಂದು ಅವರು ಹೇಳಿದರು.

