ಬೆಳಗಾವಿ : ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಕುಬೇರ ಜಾಯ್ಕನವರ ಮನೆ ಮೇಲೆ ಮಂಗಳವಾರ ಮುಂಜಾನೆ ದಿಢೀರ್‌ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ.

ಕುಬೇರ ಜಾಯಕ್ಕನವರ ಅವರ ನಿವಾಸಕ್ಕೆ ಬೆಳ್ಳಂಬೆಳಗ್ಗೆ ಆಗಮಿಸಿದ ಅಧಿಕಾರಿಗಳ ತಂಡ, ಹಲವು ಗಂಟೆಗಳ ಕಾಲ ಕಡತಗಳನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಿತು.

ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ಪರೀಕ್ಷಾ ಹಗರಣದಲ್ಲಿ ಕುಬೇರ ಜಾಯಕ್ಕನವರ ಅವರ ಸಹೋದರಿಯ ಪುತ್ರ ಅಭಿಷೇಕ ಮಹಾದೇವ ದೇವಲಾಪುರ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.