ದೇವಾಲಯ ಅಭಿವೃದ್ಧಿ, ಸಮುದಾಯಭವನ ನಿರ್ಮಾಣದ ಅನುದಾನ ಸದ್ಬಳಕೆಯಾಗಲಿ: ಚನ್ನರಾಜ ಹಟ್ಟಿಹೊಳಿ
ಬೆಳಗಾವಿ: ಗ್ರಾಮೀಣ ಭಾಗದಲ್ಲಿ ದೇಗುಲಗಳ ಅಭಿವೃದ್ಧಿ ಹಾಗೂ ಸಮುದಾಯಭವನಗಳ ನಿರ್ಮಾಣಕ್ಕೆ ಗರಿಷ್ಠ ಪ್ರಮಾಣದಲ್ಲಿ ಅನುದಾನ ನೀಡಲಾಗುತ್ತಿದ್ದು ಜನ ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.
ಅವರು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಯದ್ದಲಭಾವಿಹಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ನೂತನ ಸಮುದಾಯ ಕಟ್ಟಡ ನಿರ್ಮಾಣಕ್ಕಾಗಿ ಮಂಜೂರಾದ 3 ಲಕ್ಷ ರೂ. ಗಳ ಪೈಕಿ ಮೊದಲನೇ ಕಂತಿನ 1,66,500 ರೂ. ಗಳ ಚೆಕ್ ನ್ನು ದೇವಸ್ಥಾನ ಕಮಿಟಿಯವರಿಗೆ ಹಸ್ತಾಂತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವಸದಸ್ಯರು, ದೇವಸ್ಥಾನದ ಕಮಿಟಿಯವರು ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು.