ಬೆಳಗಾವಿ : ಪ್ರೀತಿ ‌ನಿರಾಕರಿಸಿದ್ದಕ್ಕೆ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚಿಕ್ಕೋಡಿಯ ಏಳನೇ‌ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

2021 ರ ಆಗಸ್ಟ್ 1 ರಂದು ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ನೇ ತರಗತಿ ಓದುತ್ತಿದ್ದ ಬಾಲಕಿ ಕರಿಸಿದ್ದೇಶ್ವರ ಜಾತ್ರೆಗೆ ಹೋಗುತ್ತಿದ್ದ ವೇಳೆ ಅಮೀರ್ ಲಾಲಸಾಬ್ ಜಮಾದಾರ ಎಂಬಾತ ಆಕೆಗೆ ಪ್ರೀತಿಸುವಂತೆ ಪೀಡಿಸಿದ್ದಲ್ಲದೆ ಬರ್ಬರವಾಗಿ ಹತ್ಯೆ ಮಾಡಿದ್ದ.

ಈ‌ ಕುರಿತು ಹಾರೂಗೇರಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶ ವಿಜಯಕುಮಾರ್ ಅಪರಾಧಿಗೆ ಜೀವಾವಧಿ ‌ಶಕ್ಷೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.