ಬೆಳಗಾವಿ : ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದ್ದು ಕೂದಲೆಳೆ ಅಂತರದಲ್ಲಿ RSS ಮುಖಂಡ ಅರವಿಂದರಾವ್ ದೇಶಪಾಂಡೆ ಪಾರಾದ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ.
ನಿಂತಿದ್ದ ಕಾರಿಗೆ ಪುರಸಭೆ ವಾಹನ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನ ಪಕ್ಕದಲ್ಲೇ ಇದ್ದ ಅರವಿಂದರಾವ ದೇಶಪಾಂಡೆ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಪುರಸಭೆ ವಾಹನ ಚಾಲಕ ಕುಡಿದ ಅಮಲಿನಲ್ಲಿ ಅಪಘಾತ ಮಾಡಿದ್ದಾಗಿ ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.


