ಬೆಳಗಾವಿ : ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಪಾದಯಾತ್ರೆಗೆ ತೆರಳುವ ವೇಳೆ ಅಪರಿಚಿತ ಬೈಕ್ ಗುದ್ದಿದ ಪರಿಣಾಮ ಬೆಳಗಾವಿ ಬಿಜೆಪಿ ಕಾರ್ಯಕರ್ತ ಸಾವಿಗೀಡಾದ ಘಟನೆ ಸಂಭವಿಸಿದೆ.
ಮಹಾವೀರ ಗುಡಾಜ್ ಮೃತ ದುರ್ದೈವಿ. ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಮೋರ್ಚಾದ ಪದಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಘಟನೆ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕು.



