ಬೆಳಗಾವಿ : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ–ಧಾರವಾಡ ರಸ್ತೆಯಲ್ಲಿ ನಡೆದಿದೆ.
ಸವದತ್ತಿ ಮೂಲದ ವಿನೋದ ಜೋಗೆನ್ನವರ (22), ಆಕಾಶ ಜಾಧವ (20) ಹಾಗೂ ರವಿ ಕುರಬರ (22) ಮೃತಪಟವರು ಎಂದು ಗುರುತಿಸಲಾಗಿದೆ.
ಸವದತ್ತಿ–ಧಾರವಾಡ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ತಿಳಿದು ಸವದತ್ತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



