ವಿಶ್ವವಿಖ್ಯಾತ ಮೈಸೂರು ದಸರಾ 2026ರ ಉದ್ಘಾಟಕರು ಯಾರು ಎನ್ನುವ ಗೊಂದಲಕ್ಕೆ ಕೊನೆಗೂ ಗುರುವಾರ ತೆರೆ ಬಿದ್ದಿದೆ.
ಈ ಬಾರಿ ಮೈಸೂರು ದಸರಾ ಊದ್ಘಾಟಕರಾಗಿ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಯನ್ನು ಆಯ್ಕೆ ಮಾಡಲಾಗಿದೆ ಎಂದು ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಅಕ್ಟೋಬರ್ 11ಕ್ಕೆ ಮಸೂರು ದಸರಾ ಉದ್ಘಾಟಿಸಲಿದ್ದು, ಅಕ್ಟೋಬರ್ 21 ರಂದು ವಿಜಯದಸಮಿ ಜಂಬೂಸವಾರಿ ನಡೆಯಲಿದೆ. ಅಂದು ಸಾಯಂಕಾಲ 4:10 ರ ಮೀನಾ ಲಗ್ನದಲ್ಲಿ ಜಂಬೂಸವಾರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಿದ್ದಾರೆ.
ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ 18ನೇ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ತಮ್ಮ ಅಭೂತಪೂರ್ವ ಸಾಮಾಜಿಕ ಕಳಕಳಿ, ಸರಳತೆ ಮತ್ತು ದಾಸೋಹ ಪರಂಪರೆಯಿಂದಾಗಿ ನಾಡಿನಾದ್ಯಂತ ‘ನಡೆದಾಡುವ ದೇವರು’ ಹಾಗೂ ‘ಜಲಋಷಿ’ ಎಂದೇ ಹೆಸರು ವಾಸಿಯಾಗಿದ್ದಾರೆ.




