ಬೆಳಗಾವಿ : ಕಲ್ಲಿನಿಂದ ಜಜ್ಜಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊರವಲಯದ ಅಮಟೂರ, ನಯಾನಗರ ಸಂಪರ್ಕಿಸುವ ಕಚ್ಚಾ ರಸ್ತೆಯಲ್ಲಿ ನಡೆದಿದೆ.

ಹತ್ಯೆಯಾದ ಮಹಿಳೆಯನ್ನು ನಗರದ ಗೊಲ್ಲರ ಓಣಿಯ ನಿವಾಸಿ ಲಕ್ಷ್ಮೀ ರಾಜು ಮಾಡಮಗೇರಿ (31)ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ದುಷ್ಕರ್ಮಿಗಳು ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆಗೈದು, ಬಳಿಕ ಮೃತದೇಹವನ್ನು ಸಮೀಪದ ಪೊದೆಯೊಳಗೆ ಎಸೆದು ಪರಾರಿಯಾಗಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ, ಪಿಎಸ್‌ಐ ವಾಹಿದ್ ಯಾದವಾಡ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳ ಪತ್ತೆಗೆಜಾಲ ಬಿಸಿದ್ದಾರೆ.