ಬೆಳಗಾವಿ : ಜೈಲ್ ಭರೋ ಚಳುವಳಿಗೆ ಮುಂದಾಗಿದ್ದ ರೈತ ಮುಖಂಡ ಚೂನಪ್ಪ ಪೂಜೇರಿ ಅವರನ್ನು ಬೆಳಗಾವಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಆದರೆ ರೈತರು ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ನಿನ್ನೆ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ 3,600 ಘೋಷಣೆ ಮಾಡಲಾಗಿತ್ತು. ಆದರೆ ರೈತರು ಇನ್ನೂ 50 ರೂ. ನೀಡುವಂತೆ ಭೇಡಿಕೆ ಇಟ್ಟು ಪ್ರತಿಭಟನೆಗೆ ಮುಂದಾಗಿದ್ದರು.