ಬೆಳಗಾವಿ : ಕಬ್ಬು ಬೆಲೆ ಏರಿಕೆಗೆ ಆಗ್ರಹಿಸಿ ರೈತ ಸಂಘಟನೆ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಿದ್ದ ಮಂಗಳಮುಖಿಯಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚೂನಪ್ಪ ಪೂಜೇರಿ ಅವರ ಹೋರಾಟಕ್ಕೆ ಬೆಂಬಲ ನೀಡಿದ್ದ ಡಾ. ದೀಕ್ಷಿತಾ ಹಾಗೂ ಸಂಗಡಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಹಿನ್ನೆಲೆಯಲ್ಲಿ ಎಲ್ಲರೂ ಆಕ್ರೋಶ ಹೊರಹಾಕಿದ್ದಾರೆ.




