ಬೆಳಗಾವಿ : ಸಕ್ಕರೆ ಕಾರ್ಖಾನೆಗಳು ಮೊದಲ ಹಂತದಲ್ಲಿ 3,600 ದರ ನೀಡಲು ಒಪ್ಪಿಕೊಂಡಿದ್ದು ರೈತರು ಪ್ರತಿಭಟನೆ ವಾಪಸ್ ಪಡೆದು ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಅನುವು ಮಾಡಿಕೊಡಬೇಕು ಎಂದು ರೈತ ಮುಖಂಡ ಚೂನಪ್ಪ ಪೂಜೇರಿ ಅಭಿಪ್ರಾಯಪಟ್ಟರು.
ಗುರುವಾರ ಬೆಳಗಾವಿ ನಗರದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮುಂದಾಳತ್ವದಲ್ಲಿ ರೈತ ಮುಖಂಡರ ಜೊತೆ ನಡೆದ ಮಹತ್ವದ ಸಭೆಯಲ್ಲಿ ಪ್ರತಿಭಟನೆ ವಾಪಸ್ ತಗೆದುಕೊಳ್ಳುವ ನಿರ್ಧಾರ ಮಾಡಲಾಯಿತು.
ಗುರ್ಲಾಪುರದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು. ಈಗಿನಿಂದಲೇ ಹೋರಾಟ ಕೈಬಿಡಲಾಗುತ್ತದೆ ಎಂದರು.




