ಚಿಕ್ಕೋಡಿ : ಶಿಕ್ಷಣ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಗುರುತಿಸಿ, ಚಿಕ್ಕೋಡಿಯ ರಾಜಕುಮಾರ್ ಆರ್. ಪಿಡಾಯಿ ಅವರನ್ನು ಪ್ರತಿಷ್ಠಿತ ‘ಸಮಾಜ ಸೇವಾ ರತ್ನ ಪ್ರಶಸ್ತಿ’ಗೆ ನಾಮನಿರ್ದೇಶನ ಮಾಡಲಾಗಿದೆ.

ಕರ್ನಾಟಕ ಡಿಜಿಟಲ್ ಮಾಧ್ಯಮ ಸಂಘ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ‘ಡಿಜಿಟಲ್ ಮೀಡಿಯಾ ಅವಾರ್ಡ್ಸ್ –2026’ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕಟಿಸಲಾಗಿದೆ.

ರಾಜಕುಮಾರ್ ಆರ್. ಪಿಡಾಯಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರಾಗಿ ಹಾಗೂ ಸಮಾಜ ಸೇವಕರಾಗಿ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಮೂಢನಂಬಿಕೆ, ಅಶ್ಪ್ರಶ್ಯತೆ ಸಾಮಾಜಿಕ ಜಾಗೃತಿ, ಸಾರ್ವಜನಿಕ ಹಿತಾಸಕ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಶೈಕ್ಷಣಿಕ ಸೇವೆ ಮತ್ತು ಸಮಾಜದ ಅಭಿವೃದ್ಧಿಗೆ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವುದು ಚಿಕ್ಕೋಡಿ ತಾಲ್ಲೂಕು ಹಾಗೂ ಜಿಲ್ಲೆಯ ಜನತೆಗೆ ಹೆಮ್ಮೆಯ ವಿಷಯವಾಗಿದೆ.

ರಾಜಕುಮಾರ್ ಆರ್. ಪಿಡಾಯಿ ಅವರ ಈ ಸಾಧನೆಗೆ ಶಿಕ್ಷಣ ಕ್ಷೇತ್ರದ ಗಣ್ಯರು, ಸ್ನೇಹಿತರು, ಹಿತೈಷಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.
ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರುವ ಅವರ ಪ್ರಯತ್ನಗಳಿಗೆ ಮತ್ತಷ್ಟು ಪ್ರೋತ್ಸಾಹ ದೊರೆಯಲಿ ಎಂಬುದು ಎಲ್ಲರ ಆಶಯವಾಗಿದೆ.