ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ಪೊಲೀಸ್ ಕ್ರಮ
ಬೆಂಗಳೂರು : ಇನ್ಮುಂದೆ ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಬೈಕ್ ತರುವಂತಿಲ್ಲ. ಈ ಕುರಿತು ಕಟ್ಟು ನಿಟ್ಟಿನ ಸೂಚನೆ ಪಾಲಿಸುತ್ತೇವೆ ಎಂದು, ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.
ಪಿಯುಸಿ ವಿದ್ಯಾರ್ಥಿಗಳಿಗೆ 18 ವರ್ಷ ಆಗದ ಹಿನ್ನಲೆಯಲ್ಲಿ ಡಿಎಲ್ ಪಡೆಯಲು ಸಾಧ್ಯವಾಗಲ್ಲ. ಈ ಹಿನ್ನಲೆಯಲ್ಲಿ ಪಿಯುಸಿ ವಿದ್ಯಾರ್ಥಿಗಳು ಬೈಕ್ ತಗೆದುಕೊಂಡು ಕಾಲೇಜಿಗೆ ಬರುವುದನ್ನು ಪೊಲೀಸ್ ಇಲಾಖೆ ತಡೆದಿದೆ.
ನಗರದಲ್ಲಿ ಇತ್ತೀಚಿಗೆ ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚಾಗಿದೆ. ಬೆಳ್ಳಂಬೆಳಗ್ಗೆ ಇಲ್ಲವೇ ಸಂಜೆಯಾದ್ರೆ ಸಾಕು ಮೀಸೆ ಚಿಗುರದ ಹುಡುಗರು ಬೈಕ್ ಏರಿ ಕರಾಮತ್ತು ನಡೆಸುತ್ತಿದ್ದಾರೆ. ಅದರಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುವ ಯುವಕರಂತೂ ಲೈಕ್ಸ್ಗಾಗಿ ಅಡ್ಡದಾರಿ ಹಿಡಿದಿದ್ದಾರೆ. ಇಂಥವರ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದು ನಗರ ಸಂಚಾರಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ವಾರ ನಗರಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ 14 ವ್ಹೀಲಿಂಗ್ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಗಮನಿಸಿ 12 ಕೇಸು ಹಾಕಿದ್ದಾರೆ. ವ್ಹೀಲಿಂಗ್ ಮಾಡುವವರ ವಿರುದ್ಧ ಐಪಿಸಿ ಭದ್ರತಾ ಕಲಂ 107 ಪ್ರಕರಣದಡಿ ಪ್ರಕರಣ ದಾಖಲಿಸಲಾಗುತ್ತಿದೆ.