ಬೆಳಗಾವಿ ಭೀಕರ ಅಪಘಾತ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಘಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ವಿಷಾದ ವ್ಯಕ್ತಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದರು.
ಬೆಳಗಾವಿ ನಗರಕ್ಕೆ ಭೇಟಿ ನೀಡಿರುವ ಸಿಎಂ ಬೊಮ್ಮಾಯಿ ಅಪಘಾತ ಕುರಿತು ಪ್ರತಿಕ್ರಿಯೆ ನೀಡಿದ್ದು. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಪರಿಹಾರ ನೀಡುತ್ತೇನೆ. ಡಿಸಿಗೆ ತಲಾ ಎರಡು ಲಕ್ಷ ಪರಿಹಾರ ನೀಡುವಂತೆ ಸೂಚಿಸುವೆ. ಜೊತೆಗೆ ಗಾಯಾಳುಗಳ ವೈಧ್ಯಕೀಯ ವೆಚ್ಚ ಸರ್ಕಾರ ಭರಿಸುತ್ತದೆ ಎಂದು ಹೇಳಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಹಿನ್ನಲೆಯಲ್ಲಿ ಸ್ಥಳದಲ್ಲೇ ಏಳು ಜನ ದುರ್ಮರಣ ಹೊಂದಿದ್ದು ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.
ಬೆಳಗಾವಿ ತಾಲೂಕಿನ ಗೋಕಾಕ್ ರಸ್ತೆಯ ಕಲ್ಯಾಳ ಬ್ರಿಡ್ಜ್ ಬಳಿ ಘಟನೆ ಸಂಭವಿಸಿದ್ದು ಗಾಯಾಳುಗಳನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮುಂದುವರಿಸಿದ್ದು ಮಾರೀಹಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.