Belagavi : ಹೃದಯಾಘಾತದಿಂದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ನಿಧನ
ಬೆಳಗಾವಿ : ಕ್ಯಾಂಪ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಲ್ಲಸರ್ಜ ಅಂಕಲಗಿ (45) ಭಾನುವಾರ ಹೃದಯಾಘಾತದಿಂದ ನಿಧನರಾದರು.
ಕರ್ತವ್ಯ ಮುಗಿಸಿಕೊಂಡು ಶನಿವಾರ ರಾತ್ರಿ ಊಟ ಮಾಡಿ ಮಲಗಿದ್ದಾರೆ. ಬೆಳಗ್ಗೆ ತಡವಾದರೂ ಏಳದ ಅವರನ್ನು ಮನೆಯವರು ಎಬ್ಬಿಸಲು ಹೋದಾಗ ವಿಷಯ ಗೊತ್ತಾಗಿದೆ.
ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಎಲ್ಲ ಸಿಬ್ಬಂದಿಗಳಿಗೆ ಅಚ್ಚು ಮೆಚ್ಚಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸೇರಿದಂತೆ ಹಿರಿಯ ಅಧಿಕಾರಿಗಳು ಶೋಕ ವ್ಯಕ್ತಪಡಿಸಿದ್ದಾರೆ.


