Select Page

Advertisement

Belagavi : ಕ್ರೂಸರ್ ಅಪಘಾತ ಸಾವಿನ ಸಂಖ್ಯೆ 8 ಕ್ಕೆ ಏರಿಕೆ‌ : ಗಾಯಾಳುಗಳಿಗೆ ಚಿಕಿತ್ಸೆ

Belagavi : ಕ್ರೂಸರ್ ಅಪಘಾತ ಸಾವಿನ ಸಂಖ್ಯೆ 8 ಕ್ಕೆ ಏರಿಕೆ‌ : ಗಾಯಾಳುಗಳಿಗೆ ಚಿಕಿತ್ಸೆ

ಬೆಳಗಾವಿಯಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ ತಂಡಕ್ಕೆ ಏರಿಕೆಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಹಿನ್ನಲೆಯಲ್ಲಿ ಸ್ಥಳದಲ್ಲೇ ಏಳು ಜನ ದುರ್ಮರಣ ಹೊಂದಿದ್ದು ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾನೆ.

ಬೆಳಗಾವಿ ತಾಲೂಕಿನ ಗೋಕಾಕ್ ರಸ್ತೆಯ ಕಲ್ಯಾಳ ಬ್ರಿಡ್ಜ್  ಬಳಿ ಘಟನೆ ಸಂಭವಿಸಿದ್ದು ಗಾಯಾಳುಗಳನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮುಂದುವರಿಸಿದ್ದು ಮಾರೀಹಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *