Belagavi – ಸರ್ಕಾರಿ ಶಾಲೆಗೆ ಹೊಸ ರೂಪ ಕೊಟ್ಟ ಬಿಜೆಪಿ ಕಾರ್ಯಕರ್ತರು
ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಹಾಗೂ ಪಂ. ದೀನದಯಾಳ ಉಪಾಧ್ಯಾಯ ಅವರ ಜನ್ಮದಿನ ಅಂಗವಾಗಿ ಬೆಳಗಾವಿ ನಗರ ಬಿಜೆಪಿ ಕಾರ್ಯಕರ್ತರು ಸರ್ಕಾರಿ ಶಾಲೆಗೆ ಬಣ್ಣ ಬಳಿಯುವ ಮೂಲಕ ವಿಭಿನ್ನ ಆಚರಣೆ ಮಾಡಿದ್ದಾರೆ.
ಸಂಗಮೇಶ್ವರ ನಗರದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಬಣ್ಣ ಸಂಪೂರ್ಣವಾಗಿ ಹಾಳಾಗಿತ್ತು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿದ್ದ ಸೇವಾ ಸಪ್ತಾಹದ ಅಂಗವಾಗಿ ಶಾಲೆಗೆ ಸಂಪೂರ್ಣ ಬಣ್ಣ ಬಳಿಯುವ ಮೂಲಕ ಆಚರಣೆ ನಡೆಸಿದರು.
ಪ್ರತಿ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನಲೆಯಲ್ಲಿ ವಿಭಿನ್ನ ಸಾಮಾಜಿಕ ಕಾರ್ಯ ಕೈಗೊಳ್ಳುವ ಬಿಜೆಪಿ ಮುಖಂಡರು ಈ ಭಾರಿ ಸರ್ಕಾರಿ ಶಾಲೆ ಅಂದ ಹೆಚ್ಚಿಸಿದ್ದಾರೆ. ಬಿಜೆಪಿ ಮುಖಂಡರ ಕಾರ್ಯಕ್ಕೆ ಸಾರ್ವಜನಿಕು ಹಾಗೂ ಶಾಲೆಯ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು.
ಈ ರಾಷ್ಟ್ರವನ್ನು ಮುನ್ನುಡೆಸುತ್ತಿರುವ ನಮ್ಮ ಪ್ರಧಾನಿಗಳಿಗೆ ಭಗವಂತ ಮತ್ತಷ್ಟು ಶಕ್ತಿ ಕರುಣಿಸಲಿ. ಹಿರಿಯರ ಜನ್ಮದಿನ ಅಂಗವಾಗಿ ಸರ್ಕಾರಿ ಶಾಲೆಗೆ ಬಣ್ಣ ಬಳಿದಿದ್ದು ತುಂಬಾ ಸಂತೋಷ ತರಿಸಿದೆ. ಈ ಕಾರ್ಯಕ್ಕೆ ಸಹಕರಿಸಿದ ನಗರ ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ.
ಮಹಾಂತೇಶ್ ವಕ್ಕುಂದ
ಬೆಳಗಾವಿ ನಗರ ಬಿಜೆಪಿ ಜಿಲ್ಲಾ ಕಾರ್ಯದರ್ಶಿ


