
ಭರ್ಜರಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಬೆಳಗಾವಿ : ಬೆಳಗಾವಿ ದಕ್ಷಿಣ ಕ್ಷೇತ್ರದ ಹಾಲಿ ಶಾಸಕ ಅಭಯ್ ಪಾಟೀಲ್ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ್ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದರು.
ಗುರುವಾರ ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭವಾದ ರೋಡ್ ಶೋ ನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದದಲ್ಲಿ ಬೆಳಗಾವಿ ದಕ್ಷಿಣ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಅಭಯ್ ಪಾಟೀಲ್ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಅಭ್ಯರ್ಥಿ ಡಾ. ರವಿ ಪಾಟೀಲ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಕೇಸರಿ ಶಾಲು ತೊಟ್ಟು ಬಂದಿದ್ದ ಸಾವಿರಾರು ಜನರು ವಾದ್ಯಗಳ ಮೂಲಕ ಮೆರವಣಿಗೆ ನಡೆಸಿದರು. ತೆರೆದ ವಾಹನದಲ್ಲಿ ಬಿಜೆಪಿ ಅಭ್ಯರ್ಥಿಗಳ ಜೊತೆಗೆ ಜಿಲ್ಲಾ ಮುಖಂಡರು ಸಾಥ್ ನೀಡಿದರು. ಕಿತ್ತೂರು ರಾಣಿ ಚನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸಂಗೊಳ್ಳಿ ರಾಯಣ್ಣನವರ ಜಯಘೋಷದಿಂದ ಸಾಗಿದ್ದ ರ್ಯಾಲಿ ಎಲ್ಲರ ಗಮನಸೆಳೆಯಿತು.

ನಗರದ ಮಹಾನಗರ ಪಾಲಿಕೆ ವರೆಗೆ ಸಾಗಿದ ಮೆರವಣಿಗೆ ನಂತರ ಅಭ್ಯರ್ಥಿಗಳು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಶಾಸಕ ಅಭಯ್ ಪಾಟೀಲ್. ಈ ಬಾರಿ ಜನ ಮತ್ತೊಮ್ಮೆ ಬಿಜೆಪಿಗೆ ಆಶಿರ್ವಾದ ಮಾಡಲಿದ್ದು ಜಯಶಾಲಿಯಾಗುವ ವಿಶ್ವಾಸ ವ್ಯಕ್ತಪಡಿಸಿದರು.