Select Page

ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ್ದ ವ್ಯಕ್ತಿ ಸಾವು ; 5 ಲಕ್ಷ ಪರಿಹಾರ ಘೋಷಣೆ

ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ್ದ ವ್ಯಕ್ತಿ ಸಾವು ; 5 ಲಕ್ಷ ಪರಿಹಾರ ಘೋಷಣೆ

ಬೆಳಗಾವಿಯ “ಜೈ ಬಾಪು ಜೈ ಭೀಮ್ ಜೈ ಸಂವಿಧಾನ” ಸಮಾವೇಶಕ್ಕೆ ಆಗಮಿಸಿದ್ದಾಗ ಹೃದಯಘಾತದಿಂದ ಮೃತಪಟ್ಟ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ನದಿಹರ್ಲಳ್ಳಿಯ ಬಸಪ್ಪ ಕೆಂಚಪ್ಪ ಪಾಮೆನಳ್ಳಿ ಅವರ ಕುಟುಂಬಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೆಪಿಸಿಸಿ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಬೆಳಗಾವಿಯಲ್ಲಿ ಜನವರಿ 21 ರಂದು ನಡೆದ ಸಮಾವೇಶದಲ್ಲಿ ಸುಮಾರು 60 ವರ್ಷ ವಯಸ್ಸಿನ ಕೆಂಚಪ್ಪ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು.

ಕೆಂಚಪ್ಪ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಡಿ ಕೆ ಶಿವಕುಮಾರ್ ಅವರು, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರಿಗೆ ಭಗವಂತ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!