Select Page

ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾವಣೆ : ಗೆಲುವು ನಮ್ಮದೇ ಎಂಬ ವಿಶ್ವಾಸ

ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾವಣೆ : ಗೆಲುವು ನಮ್ಮದೇ ಎಂಬ ವಿಶ್ವಾಸ

ಬೆಳಗಾವಿ : ಇಂದು ನಡೆಯುತ್ತಿರುವ ಮಹಾನಗರ ಪಾಲಿಕೆ ಚುನಾವಣೆ ಮತದಾನದ ಹಿನ್ನಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾಯಿಸಿದರು.

ಶುಕ್ರವಾರ ಜಯನಗರದ 31 ವಾರ್ಡ ನ ಶ್ರೀ ಸಾಯಿ ಕನ್ನಡ ಪ್ರಾಥಮಿಕ ಕಾನ್ವೆಂಟ್ ಸ್ಕೂಲಿನ 205 ಮತ ಕೇಂದ್ರದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾವಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಇವರು. ಮೊದಲಬಾರಿಗೆ ಪಕ್ಷದ ಚಿನ್ಹೆಯ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದು ತುಂಬಾ ಖುಷಿಯಿಂದ ಮತ ಚಲಾವಣೆ ಮಾಡಿರುವೆ. ನಮ್ಮ ಆಡಳಿತಾವಧಿಯಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳಿಂದ ಜನ ಮತ ನೀಡಿ ಈ ಬಾರಿ ಬೆಳಗಾವಿ ಮಹಾನಗರ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ ಬರುವುದು ನಿಶ್ಚಿತ ಎಂದರು.

Advertisement

Leave a reply

Your email address will not be published. Required fields are marked *