BELAGAVI : ಬೆಳ್ಳಂಬೆಳಗ್ಗೆ ರೌಡಿಗಳಿಗೆ ಶಾಕ್ ಕೊಟ್ಟ ನಗರ ಪೊಲೀಸರು
ಬೆಳಗಾವಿ : ಇತ್ತೀಚೆಗೆ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಗುಂಡೇಟ್ಟು ನೀಡಿದ್ದ ನಗರ ಪೊಲೀಸರು. ಈಗ 26 ರೌಡಿಗಳ ಮನೆಯ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ 26 ರೌಡಿಗಳ ಮನೆ ಮೇಲೆ ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಮಾರ್ಗದರ್ಶನದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳಗಿನ ಜಾವ ಆಯಾ ಪೊಲೀಸ್ ಠಾಣೆ ವ್ಯಾಪ್ತಿ ಕಾರ್ಯಾಚರಣೆ ನಡೆಸಿದರು. ದಾಳಿ ನಡೆಸಿದ ಸಂದರ್ಭದಲ್ಲಿ ಮೂವರು ರೌಡಿಗಳ ಮನೆಯಲ್ಲಿ ಮಾರಕಾಸ್ತ್ರ ಪತ್ತೆಯಾಗಿವೆ.
ರೌಡಿಗಳಾದ ರುಕ್ಮಿಣಿ ನಗರದ ನಿವಾಸಿ ಶ್ರೀಧರ ತಳವಾರ 29, ಮಾಧ್ವಾರ ರಸ್ತೆಯ ನಿವಾಸಿ ವಿನಾಯಕ ಪ್ರಧಾನ 45, ಖಂಜರ್ ಗಲ್ಲಿ ನಿವಾಸಿ ಅಲ್ತಾಫ್ ಸುಬೇದಾರ 36 ಮನೆಯಲ್ಲಿ ಮಾರಕಾಸ್ತ್ರ ಪತ್ತೆಯಾಗಿವೆ.
ಮಾಳಮಾರುತಿ, ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪಿ ರೌಡಿಗಳ ಮನೆಯಲ್ಲಿ ತಲ್ವಾರ ಸೇರಿದಂತೆ ಮಾರಕಾಸ್ತ್ರ ಪತ್ತೆಯಾಗಿದ್ದು, ರೌಡಿಗಳ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ಇತ್ತಿಚೆಗೆ ಬೆಳಗಾವಿಯಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದರಿಂದ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗಿದೆ.