ಲಕ್ಷ್ಮಣ ಸವದಿ ಹೊರಗಿಟ್ಟು ಮಹತ್ವದ ಸಭೆ ; ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು
ಬೆಳಗಾವಿ : ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಉದ್ದೇಶದಿಂದ ನಗರದ ಖಾಸಗಿ ಹೊಟೆಲ್ ನಲ್ಲಿ ಮುಖಂಡರು ಮಹತ್ವದ ಸಭೆ ನಡೆಸಿದ್ದು ಇಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅನುಪಸ್ಥಿತಿ ಇದ್ದು, ಜಾರಕಿಹೊಳಿ ಕುಟುಂಬದ ಮೂವರು ಸಹೋದರರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಅಥಣಿ ಶಾಸಕ ಲಕ್ಷ್ಮಣ ಸವದಿ ಅವರೂ ಸಹ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಿದ್ದಾರೆ. ಅವರನ್ನು ಹೊರಗಿಟ್ಡು ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ನಡೆಸಿದ್ದು ಜಿಲ್ಲಾ ಸಹಕಾರಿ ಕ್ಷೇತ್ರದಲ್ಲಿ ಬಿರುಕು ಬಿಟ್ಟಿದೆಯಾ ಎನ್ನುವ ಪ್ರಶ್ನೆ ಉದ್ಬವವಾಗಿದೆ.
ಒಂದೇ ವೇದಿಕೆಯಲ್ಲಿಯೇ ಜಾರಕಿಹೊಳಿ ಸಹೋದರರು ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಅಣ್ಣಾಸಾಬೇಬ ಜೊಲ್ಲೆ, ಅರವಿಂದ ಪಾಟೀಲ್, ಮಹಾಂತೇಶ ದೊಡ್ಡಗೌಡರ, ರತ್ನಾ ಮಾಮನಿ, ರಾಜು ಅಂಕಲಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


