ಇಂದು ಬೆಳಗಾವಿಗೆ ರಾಷ್ಟ್ರಪತಿ ಆಗಮನ ; ಹೊಸ ಮೈಲುಗಲ್ಲು ಸಾಧಿಸಲಿರುವ ಕೆಎಲ್ಇ ಸಂಸ್ಥೆ
ಬೆಳಗಾವಿ : ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಧ್ಯಾಹ್ನ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ಕೆಎಲ್ಇ ನೂತನ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.
ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದ ಜನರಿಗೆ ಸಾಕಷ್ಟು ಉಪಯೋಗ ಆಗಲಿದೆ.