Select Page

Advertisement

ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್ ; ಎಸ್ಪಿ ಖಡಕ್ ಎಚ್ಚರಿಕೆ

ಲಾಂಗು, ಮಚ್ಚು ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್ ; ಎಸ್ಪಿ ಖಡಕ್ ಎಚ್ಚರಿಕೆ

ಬೆಳಗಾವಿ : ಲಾಂಗು, ಮಚ್ಚು ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹಾಕಿ ಹೀರೋ ಆಗಲು ಹೋಗಿದ್ದವ ಸಧ್ಯ ಪೊಲೀಸರ ಅತಿಥಿ ಆಗಿದ್ದಾನೆ. ಘಡನೆ ನಂತರ ಬೆಳಗಾವಿ ಎಸ್ಪಿ ರೋಡ್ ರೋಮಿಯೊಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೈಲಹೊಂಗಲ ತಾಲೂಕಿನ ಮೇಕಲಮರಡಿಯ ಮುಶ್ರಫ್ಖಾನ್ ಎಂಬಾತ ಕೈಯಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿದ್ದಲ್ಲದೆ, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ನೇಸರಗಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ‌ ಕುರಿತು ಪ್ರತಿಕ್ರಿಯೆ ನೀಡಿದ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್. ಮಾರಕಾಸ್ತ್ರ ಬಳಸಿ ಈ ರೀತಿಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡಿದರೆ, ಅಂತಹ ಆರೋಪಿಗಳನ್ನು ಬಂಧಿಸಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!