ಸಂತಿಬಸ್ತವಾಡದಲ್ಲಿ ಪೊಲೀಸ್ ಆಯುಕ್ತರಿಂದ ಶಾಂತಿ ಸಭೆ
ಬೆಳಗಾವಿ : ಮುಸ್ಲಿಂ ಧರ್ಮಗ್ರಂಥ ಸುಟ್ಟ ಪ್ರಕರಣ ಸೇರಿದಂತೆ ಕಳೆದ ಕೆಲ ದಿನಗಳಿಂದ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಸಂಭವಿಸುತ್ತಿರುವ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತರು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭೂಷನ ಗುಲಾಬರಾವ್ ಬೊರಸೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಾವಿ ನಗರ ಬೆಳೆಯುತ್ತಿದೆ. ಈ ಸಂದರ್ಭದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಬದುಕು ಸಾಗಿಸದರೆ ಮಾತ್ರ ಕಾನೂನು ಸುವ್ಯವಸ್ಥೆ ಸರಿಯಾಗಿರಲು ಸಾಧ್ಯ. ಕೆಲ ಕಿಡಿಗೇಡಿಗಳು ಜನ ನೆಮ್ಮದಿ ಹಾಳು ಮಾಡುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


