ಪ್ರಚೋದನಕಾರಿ ಮೆಸೇಜ್ ಮಾಡುವರು ಎಚ್ಚರ : ಬೆಳಗಾವಿಯಲ್ಲಿ ಮೂವರ ವಿರುದ್ಧ ಪ್ರಕರಣ
ಬೆಳಗಾವಿ : ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಆರೋಪದ ಮೇಲೆ ನಗರದ ಮೂವರ ಮೇಲೆ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆಗೆ ಕದಡುವಂತೆ ಸಂದೇಶ ಕಳುಹಿಸುವುದು ಮಾತ್ರವಲ್ಲದೆ ಬೇರೆಯವರಿಗೆ ಭಿತ್ತರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟು ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಧರ್ಮ ಮತ್ತು ಭಾಷಿಕರ ಮಧ್ಯೆ ಜಗಳ ಹಚ್ಚುವ ಕೆಲಸ ಮಯಾರೂ ಮಾಡಬಾರದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.