ಅನಾರೋಗ್ಯದಿಂದ ಇಬ್ಬರು ಪೊಲೀಸ್ ಅಧಿಕಾರಿಗಳು ನಿಧನ
ಬೆಳಗಾವಿ : ಅನಾರೋಗ್ಯದಿಂದ ಬಳಲುತ್ತಿದ್ದು ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆಯ ಡಿಎಆರ್ ವಿಭಾಗದ ಇಬ್ಬರು ಪೊಲೀಸ್ ಅಧಿಕಾರಿಗಳು ವಿಧಿವಶರಾಗಿದ್ದಾರೆ.
ಬೆಳಗಾವಿ ಆಸ್ಪತ್ರೆಯಲ್ಲಿ ಲಿವರ್ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದ ARSI ಸುರೇಶ್ ತಹಶಿಲ್ದಾರ ಹಾಗೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆ ಹಿನ್ನಲೆ ಚಿಕಿತ್ಸೆ ಪಡೆಯುತ್ತಿದ್ದ AHC ದುಂಡಪ್ಪ ಮಗದುಮ್ ಎಂಬುವವರು ನಿಧನಹೊಂದಿದ್ದಾರೆ.
ಇಬ್ಬರು ಪೊಲೀಸ್ ಅಧಿಕಾರಿಗಳ ನಿಧನಕ್ಕೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪೊಲೀಸ್ ಇಲಾಖೆ ಸಂತಾಪ ವ್ಯಕ್ತಪಡಿಸಿದೆ.