
ಬೆಳಗಾವಿ : ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ: ಅರ್ಜಿ ಆಹ್ವಾನ

ಬೆಳಗಾವಿ : 2021-22 ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಬೆಳಗಾವಿಯ ಸರ್ಕಾರಿ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ರಾಮತೀರ್ಥನಗರದಲ್ಲಿ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ಇಚ್ಛಿಸಲಿರುವ ಅರ್ಹ ವಿದ್ಯಾರ್ಥಿಗಳು ಅ.08 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
5 ರಿಂದ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ.ವರ್ಗ / ಪ.ಜಾತಿ ಹಾಗೂ ಇತರೆ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ರಾಮತೀರ್ಥನಗರ ಮತ್ತು ಬೆಳಗಾವಿ ಟೌನ್ ಇಲ್ಲಿ ಮೆಟ್ರಿಕ್ ನಂತರದ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಕೋರಿ ಅರ್ಜಿ ಅಹ್ವಾನಿಸಲಾಗಿದೆ.
ಇಲಾಖೆಯ ವೆಬ್ ಸೈಟ್: tw.kar.nic.in ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ, ಆನ್ ಲೈನ್ ಲ್ಲಿ ಅರ್ಜಿ ಸಲ್ಲಿಸಿದ ಪ್ರಿಂಟ್ ಪಡೆದು ಭಾವಚಿತ್ರದೊಂದಿಗೆ ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರು/ ಕಾಲೇಜು ಪ್ರಾಚಾರ್ಯರಿಂದ ಸಹಿ ಪಡೆದು ಇದರೊಂದಿಗೆ ಹಿಂದಿನ ಶೈಕ್ಷಣಿಕ ವರ್ಷ ಪಾಸಾದ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ ಕಾರ್ಡ ಪ್ರತಿ (ಕಡ್ಡಾಯ), ಎಸ್.ಎಸ್.ಪಿ ವಿದ್ಯಾರ್ಥಿ ವೇತನ ಅರ್ಜಿಯ ಪ್ರತಿ ಪತ್ರದೊಂದಿಗೆ ಅರ್ಜಿಯನ್ನು ನಿಗದಿತ ದಿನಾಂಕದೊಳಗಾಗಿ ನೆಹರು ನಗರದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಸಲ್ಲಿಸುವುದು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಉಪಾಹಾರ ಹಾಗೂ ಇತರೆ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಹಾಗೂ ಇದರ ಜೊತೆಗೆ ಅನುಭವಿ ಶಿಕ್ಷಕರಿಂದ ಉಚಿತ ಭೋಧನಾ ವ್ಯವಸ್ಥೆ ಮಾಡಿಸಲಾಗುವುದು (ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಮಾತ್ರ). ಬೆಳಗಾವಿಯ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.