ಇಬ್ಬರು ಹೆಣ್ಣುಮಕ್ಕಳನ್ನು ಭೀಕರವಾಗಿ ಕೊಲೆಮಾಡಿದ ಮಲತಂದೆ
ಬೆಂಗಳೂರು : ಮಲತಂದೆಯಿಂದಲೇ ಇಬ್ಬರು ಹೆಣ್ಣುಮಕ್ಕಳ ದಾರುಣ ಕೊಲೆಯಾಗಿರುವ ಘಟನೆ ಬೆಂಗಳೂರಿನ ದಾಸರಹಳ್ಳಿ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ.
ಶನಿವಾರ ಸಂಜೆ ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತಮೂಲದ ಮಹಿಳೆಯ ಮನೆಯಲ್ಲಿ ಘಟನೆ ನಡೆದಿದೆ. ಸ್ವತಃ ಮಲತಂದೆಯೇ ಸುಮಾರು 14 ಹಾಗೂ 16 ವರ್ಷದ ಹೆಣ್ಣು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ.
ಸುಮಿತ್ ಕೊಲೆ ಮಾಡಿ ಎಸ್ಕೇಪ್ ಆಗಿರುವ ಮಲತಂದೆ. ಸೃಷ್ಠಿ (14) ಮತ್ತು ಸೋನಿಯಾ(16) ಕೊಲೆಯಾದ ಅಪ್ರಾಪ್ತ ಮಕ್ಕಳು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು, ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹಾಗೂ ಸೊಕೊ ಟೀಂ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಜೋಡಿ ಜೊಲೆ ಏರಿಯಾ ಜನರನ್ನ ಭಯಭೀತಗೊಳಿಸಿದೆ.


