ಬೆಂಗಳೂರು : ರಾಜ್ಯದ ನಿವೃತ್ತ ಡಿಜಿ ಐಜಿಪಿ ಓಂ‌ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದ್ದು, ನಗರದ ಹೆಚ್.ಎಸ್.ಆರ್ ಲೇಔಟ್ ನಲ್ಲಿ ಘಟನೆ ಸಂಭವಿಸಿದೆ.

ಓಂ ಪ್ರಕಾಶ್ ಅವರ ಪತ್ನಿ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ‌ ಕೇಳಿಬರುತ್ತಿವೆ. ಮಾನಸಿಕ ಸ್ಥಿತಿ ಕಳೆದುಕೊಂಡು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿನೀಡಿ‌ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ರಕ್ತದ ಕಲೆಗಳನ್ನು ಕಂಡು ಪೊಲೀಸರು ಶಾಕ್ ಆಗಿದ್ದಾರೆ.