ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ ; ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು : ಮಾಂಗಲ್ಯ ಸರ ಕಸಿಯುವ ವೇಳೆ ಪ್ರತಿರೋಧ ತೋರಿ ತಪ್ಪಿಸಿಕೊಳ್ಳಲು ಯತ್ನಿಸಿದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಮಾದನಾಯಕನಹಳ್ಳಿಯ ಹುಸ್ಕೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಹುಸ್ಕೂರು ಗ್ರಾಮದಲ್ಲಿ ಜ್ಯೋತಿ (45) ಮೃತಪಟ್ಟ ಮಹಿಳೆ, ಬೆಳಗ್ಗೆ ಮನೆಯ ಮುಂದೆ ಜ್ಯೋತಿ ಅವರು ಕಸ ಗುಡಿಸುತ್ತಿದ್ದಾಗ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಯ ಕೊರಳಲ್ಲಿದ್ದ 7೦ ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದಿದ್ದಾರೆ.
ಪ್ರತಿರೋಧ ತೋರಿದರೂ ದುಷ್ಕರ್ಮಿಗಳು ಬಲವಾಗಿ ಸರ ಕಸಿದುಕೊಂಡು ಸ್ಥಳದಲ್ಲಿ ಕುಸಿದು ಬಿದ್ದು ಗಾಯಗೊಂಡು ಅಸ್ವಸ್ಥಗೊಂಡ ಜ್ಯೋತಿ ಅವರನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಜ್ಯೋತಿ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಸರಗಳ್ಳರ ಮೇಲೆ ಕೊಲೆ ಪ್ರಕರಣ ದಾಖಲಿಸಿ ಬಂಧನ ಕಾರ್ಯಾಚರಣೆ ಕೈಗೊಳ್ಳಲಾಗಿದೆ.


