ಭೀಕರ ರಸ್ತೆ ಅಪಘಾತ ; ಏಳು ಜನ ಸಾವು..!

ಬೆಂಗಳೂರು : ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಏಳು ಜನ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ನಡೆದಿದೆ.
ಹೊಸಪೇಟೆ – ದಾವಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಲಾರಿ ಮತ್ತು ಬೈಕ್ ನಡುವೆ ಅಪಘಾತ ಭವಿಸಿದೆ. ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಹಾಗೂ ಬೈಕ್ ಸವಾರ ಮೃತಪಟ್ಟಿದ್ದಾನೆ.
ಅಪಘಾತ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಮಾಹಿತಿ ಕಲೆಹಾಕಿದ್ದಾರೆ.


