ಬೆಂಗಳೂರಿನ ಯುವತಿ ಮೇಲೆ ಅತ್ಯಾಚಾರ…?
ಬೆಂಗಳೂರು : ನಗರದ ಹೆಚ್ಎಸ್ಆರ್ ಲೇಔಟ್ ನಲ್ಲಿ ಯುವತಿಯೋರ್ವವಳ ಮೇಲೆ ಲೈಂಯ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಸ್ನೇಹಿತರ ಜೊತೆ ಯುವತಿ ಪಾರ್ಟಿ ಮಾಡಿ ವಾಪಸ್ ಆಟೋದಲ್ಲಿ ಬರುವ ಸಂದರ್ಭದಲ್ಲಿ ಅಪರಿಚಿತರಿಂದ ಅತ್ಯಾಚಾರಕ್ಕೆ ಯತ್ನ ನಡೆದಿದೆ ಎಂದು ತಿಳಿದುಬಂದಿದೆ.
ಹೆಬ್ಬಗೋಡಿ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಕರಣ ಕುರಿತು ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದು. ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿರುವುದು ತಿಳಿದುಬಂದಿದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.


