
ಎ ಕಿಡ್ಸ್ ಮಾಂಟೆಸರಿ ಶಾಲೆಯಲ್ಲಿ ಚಿಣ್ಣರ ಘಟಿಕೋತ್ಸವದ ಸಂಭ್ರಮ

ಬೆಂಗಳೂರು : ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ಲಭಿಸಿದರೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ ಎಂದು ಎ ಕಿಡ್ಸ್ ಮಾಂಟೆಸರಿ ಶಾಲೆಯ
ಪ್ರಾಂಶುಪಾಲರಾದ ಜೆ.ಎಸ್ ಸಂತೋಷ್ ಅಭಿಪ್ರಾಯಪಟ್ಟರು.
ಬೆಂಗಳೂರು ನಗರದ ಅತ್ತಿಬೆಲೆಯ ಎ ಕಿಡ್ಸ್ ಮಾಂಟೆಸರಿ ಶಾಲೆಯ ವಾರ್ಷಿಕೋತ್ಸವ ಹಾಗೂ ಚಿಣ್ಣರ ಘಟಿಕೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಇವರು. ಭಾರತೀಯ ಶಿಕ್ಷಣ ವ್ಯವಸ್ಥೆ ತನ್ನದೇ ವೈಶಿಷ್ಟ್ಯ ಹೊಂದಿದೆ. ಇಂದಿನ ಮಕ್ಕಳು ಮೋಬೈಲ್ ಸೇರಿದಂತೆ ಬೇಡವಾದ ವಿಷಯಗಳಿಗೆ ಗಮನಹರಿಸುವುದು ಸಾಮಾನ್ಯವಾಗಿದೆ. ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಬಾಲ್ಯದಲ್ಲೇ ಸಂಸ್ಕಾರಯುತ ಶಿಕ್ಷಣ ನೀಡುವ ಅವಶ್ಯಕತೆ ಇದೆ ಎಂದರು.

ಖ್ಯಾತ ವಿಜ್ಞಾನಿ ಡಾ. ಅಬ್ದುಲ್ ಕಲಾಂ ಅವರು ಹೇಳಿದಂತೆ. ಕಲಿಕೆಯು ನಿಮಗೆ ಸೃಜನಶೀಲತೆಯನ್ನು ನೀಡುತ್ತದೆ, ಸೃಜನಶೀಲತೆಯು ಚಿಂತನೆಗೆ ಕಾರಣವಾಗುತ್ತದೆ, ಆಲೋಚನೆಯು ಜ್ಞಾನವನ್ನು ನೀಡುತ್ತದೆ, ಜ್ಞಾನವು ನಿಮ್ಮನ್ನು ಶ್ರೇಷ್ಠರನ್ನಾಗಿ ರೂಪಿಸಲು ಸಹಕಾರಿಯಾಗುತ್ತದೆ. ಇದು ಅತ್ಯಂತ ಶ್ರೇಷ್ಠವಾದ ಮಾತು. ಮಕ್ಕಳನ್ನು ಕೇವಲ ವಿದ್ಯಾವಂತರನ್ನಾಗಿ ಮಾಡದೆ, ದೇಶದ ಆಸ್ತಿಯನ್ನಾಗಿ ರೂಪಿಸುವುದು ಮುಖ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಕ್ಕಳಿಗೆ ಮಕ್ಕಳಿಗೆ ಶೈಕ್ಷಣಿಕ ಪ್ರಮಾಣ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲೆಯ ಸಿಬ್ಬಂದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.