
ವಕೀಲೆ ಆತ್ಮಹತ್ಯೆ ಪ್ರಕರಣ ; ಡಿವೈಎಸ್ಪಿ ಕನಕಲಕ್ಷ್ಮೀ ಅರೆಸ್ಟ್

ಬೆಂಗಳೂರು : ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಡಿವೈಎಸ್ಪಿ ಕನಕಲಕ್ಷ್ಮೀಯನ್ನು ಬಂಧಿಸಿದ್ದಾರೆ.
ವಕೀಲೆ ಜೀವಾ 2024 ರ ನವೆಂಬರ್ 11 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರು ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ ನೋಟ್ ನಲ್ಲಿ ಡಿವೈಎಸ್ಪಿ ಕನಕಲಕ್ಷ್ಮೀ ಹೆಸರು ಉಲ್ಲೇಖಿಸಿದ್ದರು. ಈ ಕುರಿತು ವಕೀಲೆ ತಂಗಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು.
ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಜೀವಾ 13 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಜೀವಾ ಸಹೋದರಿ ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮಿ ವಿರುದ್ಧ ದೂರು ನೀಡಿದ್ದರು.
ಈ ಪ್ರಕರಣವನ್ನು ಪೊಲೀಸ್ ಆಯುಕ್ತ ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿದ್ದರು. ಆದರೆ ವಕೀಲರ ಸಂಘ ಸಿಬಿಐಗೆ ವರ್ಗಾಯಿಸುವಂತೆ ಆಗ್ರಹಿಸಿತ್ತು. ಕೊನೆಗೆ ಕೋರ್ಟ್ ಎಸ್ಐಟಿ ರಚಿಸಿ ತನಿಖೆಗೆ ಆದೇಶಿಸಿತ್ತು.
ಡಿವೈಎಸ್ಪಿ ಕಮಕಲಕ್ಷ್ಮೀ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿರುವ ಹಿನ್ನಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.