ಅಥಣಿ : ವಿದ್ಯುತ್ ಟ್ರಾನ್ಸ್ಫಾರ್ಮರ್ ಹಾಳಾಗಿ ಸಂಕಷ್ಟ ಅನುಭವಿಸುತ್ತಿದ್ದ ರೈತರ ಕಷ್ಟಕ್ಕೆ ಧಾವಿಸಿದ ಅಥಣಿ ಹೆಸ್ಕಾಂ ಇಲಾಖೆ ಸಿಬ್ಬಂದಿ ತ್ವರಿತವಾಗಿ ಸಮಸ್ಯೆ ಬಗೆರಿಸಿದ್ದಾರೆ.
ಅಥಣಿ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಹಾಳಾಗಿ ರೈತರಿಗೆ ಸಮಸ್ಯೆ ಉಂಟಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಹೆಸ್ಕಾಂ ಇಲಾಖೆ ಸಿಬ್ಬಂದಿ ಹೊಸ
ವಿದ್ಯುತ್ ಟ್ರಾನ್ಸ್ಫಾರ್ಮರ್ ಅಳವಡಿಸುವ ಮೂಲಕ ಸಮಸ್ಯೆ ಪರಿಹರಿಸಿದ್ದಾರೆ.
ಹೆಸ್ಕಾಂ ಸಿಬ್ಬಂದಿಗಳ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ರೈತರು ಕೃತಜ್ಞತೆ ಸಲ್ಲಿಸಿದ್ದಾರೆ.



